ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ

ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ ನೀಡಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್​ ಸಮ್ಮತಿ ನೀಡಿದೆ.

ಹೈಕೋರ್ಟ್​ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ, ಸರ್ವೆ ನಡೆಸಲು ಪುರಾತತ್ವ ಇಲಾಖೆಗೆ ಅನುಮತಿ ನೀಡಿ ತೀರ್ಪು ನೀಡಿದೆ. ಸರ್ವೆಗೆ ತಡೆ ನೀಡುವಂತೆ ಕೋರಿದ್ದ ಮಸೀದಿ ಮಂಡಳಿ ಅರ್ಜಿ ವಜಾಗೊಳಿಸಿದೆ. ಹಲವು ಷರತ್ತು ವಿಧಿಸಿ ಸರ್ವೆ ನಡೆಸಲು ಅನುಮತಿ ನೀಡಲಾಗಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಯನ್ನು ಪ್ರಾರಂಭಿಸಲಾಗುವುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಜ್ಞಾನವಾಪಿ ಸರ್ವೆ ಪ್ರಕರಣದಲ್ಲಿ ಹಿಂದೂ ಪರವಾಗಿ ವಿಷ್ಣು ಶಂಕರ್ ಜೈನ್ ಸುದ್ದಿಗಾರರಿಗೆ ತಿಳಿಸಿದರು.

Latest Indian news

Popular Stories