ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ; ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ

ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಂದು ರಾಜ್ಯ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ಕೋರ್ ಕಮಿಟಿ ಸಭೆ ನಡೆಯಿತು.

ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರು, ಶಾಸಕರು ಸಭೆಯಲ್ಲಿ ಪಾಲ್ಗೊಂಡರು.

ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಲಾಗಿದ್ದು, ಮಾರ್ಚ್ 31 ರಂದು ಕೋರ್ ಕಮಿಟಿ ಸದಸ್ಯರೊಂದಿಗೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.  ಸಭೆಯ ನಂತರ ಅಮಿತ್ ಶಾ ದೆಹಲಿಗೆ ತೆರಳಿದರು.

Latest Indian news

Popular Stories