Featured StoryState News

ಕೋಮು ಪ್ರಚೋದಕ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಪಿಸಿಆರ್’ನಿಂದ ಪೊಲೀಸ್ ಮಹಾ ನಿರ್ದೇಶಕರಿಗೆ ಆಗ್ರಹ

ಬೆಂಗಳೂರು: ವಿದ್ಯಾರ್ಥಿನಿ ಮುಸ್ಕಾನ್ ಕುರಿತು ಅವಹೇಳನಕಾರಿ ಹೇಳಿಕೆ ಹಾಗೂ ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದಕ ಹೇಳಿಕೆ ನೀಡಿದ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎ.ಪಿ.ಸಿ‌.ಆರ್ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರನ್ನು ಆಗ್ರಹಿಸಿದೆ.

ದೂರಿನಲ್ಲಿ “#ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ವಿಧಿಸಲಾಗಿರುವ ಹಿಜಾಬ್ ನಿಷೇಧವನ್ನು ಹಿಂಪಡೆಯುವ ಕುರಿತು ಹೇಳಿಕೆ ನೀಡಿ ಮೂಲಭೂತ ಹಕ್ಕನ್ನು ಎತ್ತಿ ಹಿಡಿಯುವ ಕುರಿತು ಹೇಳಿದ್ದರು. ಈ ಹೇಳಿಕೆಯನ್ನು ಉಲ್ಲೇಖಿಸಿ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿದ್ಯಾರ್ಥಿನಿ ಮುಸ್ಕಾನ್’ಳನ್ನು ಗುರಿಯಾಗಿಸಿ ಮಾನಹಾನಿ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ರಾಜ್ಯದಲ್ಲಿ ಕೋಮು ದ್ವೇಷದ ಭಾಷಣ ಮಾಡಿ ಶಾಂತಿ ಸುವ್ಯವಸ್ಥೆ ಕದಡುವ ನಿರಂತರ ಪ್ರಯತ್ನದಲ್ಲಿದ್ದು ಈ ಮುಂಚೆಯೂ ಕೂಡ ಅವರ ಹಲವು ಭಾಷಣದಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ದ್ವೇಷ ಭಾಷಣ ಮಾಡಿದ್ದಾರೆ. ಇದೀಗ ಮತ್ತೊಮ್ಮೆ ಸಂವಿಧಾನ ಕೊಟ್ಟ ಧಾರ್ಮಿಕ ಸ್ವಾತಂತ್ರ್ಯದ ಅನುಗುಣವಾಗಿ ವಿದ್ಯಾರ್ಥಿನಿಯರು ಧರಿಸುವ ಶಿರವಸ್ತ್ರದ ಕುರಿತು ಆಧಾರ ರಹಿತವಾಗಿ ಮಾತನಾಡುತ್ತ ಮುಸ್ಕಾನ್ ಎಂಬ ವಿದ್ಯಾರ್ಥಿನಿಯ ಕುರಿತು ಮಾನಹಾನಿಕಾರ ಹೇಳಿಕೆ ನೀಡಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ.

ಮಾಧ್ಯಮಗಳ ವರದಿಯ ಪ್ರಕಾರ “ಮುಸ್ಕಾನ್, ನೀನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಅಲ್ಲಾಹು ಅಕ್ಬರ್ ಎಂದು ಹೇಳಬೇಕು.ಈ ದೇಶದಲ್ಲಿ ಹೇಳಬೇಕಿರೋದು ರಾಮ ನಾಮ. ಅಲ್ಲಾಹು ಅಕ್ಬರ್ ಎನ್ನಬೇಕಾದರೆ ನೀವು ಮುಸಲ್ಮಾನ ದೇಶಕ್ಕೆ ಹೋಗಿ. ಮುಸ್ಕಾನ್‌ಗೆ ಶಹಭಾಷ್‌ಗಿರಿ ಕೊಟ್ಟಿದ್ದು ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಸದಸ್ಯ. ಮುಸ್ಕಾನ್‌ಗೂ ಕೂಡ ಅಲ್ ಖೈದಾ ಜೊತೆ ಸಂಪರ್ಕ ಇದೆ. ತಾಕತ್ತಿದ್ದರೆ ಮುಸ್ಕಾನ್ ಮತ್ತೆ ಶಾಲೆಗೆ ಹೋಗುವ ಕೆಲಸ ಮಾಡಲಿ. ಇದನ್ನು ನೀವು ಹಿಂದೂಗಳ ದೌರ್ಬಲ್ಯ ಅಂದುಕೊಳ್ಳಬೇಡಿ. ನಾವು ಒಟ್ಟಾಗಿರಲು ಬಯಸುತ್ತೇವೆ” ಎಂದಿದ್ದಾರೆ.

“ಅದರೊಂದಿಗೆ ಬ್ರಿಟಿಷರ ವಿರುದ್ಧ ನಾವು ಮಾನಸಿಕವಾಗಿ ಸೋತೆವು ಅಷ್ಟೆ. ಮೊಘಲರು ಒಳ ನುಸುಳಿ ಈ ದೇಶವನ್ನು ಮುಸ್ಲಿಂ ದೇಶ ಮಾಡಲು ಮುಂದಾದರು. ಘಜನಿ ಮಹಮ್ಮದ್ ಕಾಲದಿಂದಲೂ ಈ ದೇಶವನ್ನು ಮುಸ್ಲಿಂ ದೇಶ ಮಾಡಬೇಕು ಎಂಬುದಿದೆ. ದಾಳಿ ವೇಳೆ ಹಿಂದುಗಳ ಕೊಲೆ ಅತ್ಯಾಚಾರ ಮಾಡಲಾಯಿತು ಎಂದು ಕಿಡಿಕಾರಿದರು. ದೇಶವನ್ನು ಇಸ್ಲಾಮೀಕರಣ, ಕ್ರಿಶ್ಚಿಯನ್ನೀಕರಣ ಮಾಡಲು ಹಲವು ಯತ್ನಗಳಾಗಿದೆ. ಆಸೆ, ಆಮಿಷ, ಬೆದರಿಕೆ, ಕೊಲೆ ಮಾಡಿ ಮತಾಂತರ ಮಾಡಿದ್ದಾರೆ. ಕ್ರಿಶ್ಚಿಯನ್ನರು, ಮುಸ್ಲಿಮರು ಕಾಲಿಟ್ಟಾಗಲೇ ದೇಶವನ್ನು ಮತಾಂತರ ಮಾಡಲು ಯೋಚಿಸಿದ್ದರು ಎಂದರು. ಸಂಖ್ಯೆ ಹೆಚ್ಚಾಗುತ್ತಿದೆ. ಈ ದೇಶವನ್ನು ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಂರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ. ಅದಕ್ಕಾಗಿ ನಾವು ಹೋರಾಟ ಮಾಡಬೇಕು. ನಮ್ಮ ದೇಶವನ್ನು ಉಳಿಸಬೇಕು. ಮುಸಲ್ಮಾನ್ ಹುಡುಗರು ಅಷ್ಟೇ ಅಲ್ಲ, ಮುಸ್ಲಿಂ ಮಹಿಳೆಯರು ಮತಾಂತರ ಮಾಡುತ್ತಿದ್ದಾರೆ. ನಿಮ್ಮ ಮುಸ್ಲಿಂ ಸಮಾಜದಲ್ಲಿ ಹುಡುಗಿಯರು ಇಲ್ಲವಾ. ಹಿಂದೂ ಹುಡುಗಿಯರನ್ನು ಯಾಕೆ ಟಾರ್ಗೆಟ್ ಮಾಡುತ್ತೀರಾ. ಮತಾಂತರ ಮಾಡಲು ಲವ್ ಜಿಹಾದ್ ಪ್ರಯತ್ನಗಳಾಗುತ್ತಿವೆ ಎಂದು ಎಚ್ಚರಿಸಿದರು. ಮುಸ್ಲಿಮರಿಗೆ ಈ ಹಿಂದೆ ತಲಾಕ್ ಹೇಳುವ ಅವಕಾಶ ಇತ್ತು. ಮೋದಿ ಸರ್ಕಾರದಿಂದ ತ್ರಿವಳಿ ತಲಾಕ್ ಇಲ್ಲದಾಗಿದೆ. ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ. ಬ್ರಿಟಿಷರ ವಿರುದ್ಧ ನಾವು ಮಾನಸಿಕವಾಗಿ ಸೋತೆವು ಅಷ್ಟೆ. ಮೊಘಲರು ಒಳ ನುಸುಳಿ ಈ ದೇಶವನ್ನು ಮುಸ್ಲಿಂ ದೇಶ ಮಾಡಲು ಮುಂದಾದರು. ಘಜನಿ ಮಹಮ್ಮದ್ ಕಾಲದಿಂದಲೂ ಈ ದೇಶವನ್ನು ಮುಸ್ಲಿಂ ದೇಶ ಮಾಡಬೇಕು ಎಂಬುದಿದೆ. ದಾಳಿ ವೇಳೆ ಹಿಂದುಗಳ ಕೊಲೆ ಅತ್ಯಾಚಾರ ಮಾಡಲಾಯಿತು ಎಂದು ಕಿಡಿಕಾರಿದರು. ದೇಶವನ್ನು ಇಸ್ಲಾಮೀಕರಣ, ಕ್ರಿಶ್ಚಿಯನ್ನೀಕರಣ ಮಾಡಲು ಹಲವು ಯತ್ನಗಳಾಗಿದೆ. ಆಸೆ, ಆಮಿಷ, ಬೆದರಿಕೆ, ಕೊಲೆ ಮಾಡಿ ಮತಾಂತರ ಮಾಡಿದ್ದಾರೆ. ಕ್ರಿಶ್ಚಿಯನ್ನರು, ಮುಸ್ಲಿಮರು ಕಾಲಿಟ್ಟಾಗಲೇ ದೇಶವನ್ನು ಮತಾಂತರ ಮಾಡಲು ಯೋಚಿಸಿದ್ದರು” ಎಂದು ಹೇಳಿಕೆಗಳನ್ನು ನೀಡಲಾಗಿದೆ.

ಈ ಹೇಳಿಕೆಯಲ್ಲಿ ಆಧಾರ ರಹಿತವಾಗಿ ಕಲ್ಲಡ್ಕ ಪ್ರಭಾಕರ್ ಭಟ್ ಒರ್ವ ವಿದ್ಯಾರ್ಥಿನಿಯ ಮಾನ ಹಾನಿ ಮಾಡುವುದರೊಂದಿಗೆ ಬೆದರಿಕೆ ಹಾಕಿ ಸಮುದಾಯಗಳ ನಡುವೆ ದ್ವೇಷ ಬಿತ್ತುವ ಪ್ರಯತ್ನ ಮಾಡಿದ್ದು ಅವರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೇಂದು ಎಪಿಸಿಆರ್ ರಾಜ್ಯ ಕಾರ್ಯದರ್ಶಿ ಹುಸೇನ್ ಕೋಡಿಬೆಂಗ್ರೆ ಆಗ್ರಹಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button