ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಪ್ರಕರಣ ದಾಖಲು

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ ಹುಟ್ಟಿಹಾಕಲು ಯತ್ನ ಮಾಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಆರ್.‌ಕನ್ನಡ ಸಂಪಾದಕ ನಿರಂಜನ್ ಅವರ ವಿರುದ್ಧ ಎಸ್. ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾರ್ಚ್ 27ರಂದು ಸಂಜೆ ಸಂಜೆ 7:15 ಗಂಟೆಗೆ ಆರ್ ಕನ್ನಡ ಸುದ್ದಿ ವಾಹಿನಿಯಲ್ಲಿ ಎಂಜಿ ರಸ್ತೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಚರಿಸುವಾಗ ವಾಹನಗಳ ಸಂಚಾರ ತಡೆದು ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಾಡಿದ ವಿಡಿಯೋ ತುಣುಕನ್ನು ಪ್ರಸಾರ ಮಾಡಲಾಗಿದೆ.

Latest Indian news

Popular Stories