ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಗುಂಡು ಹಾರಿಸಿದ ಇಬ್ಬರು ‘ಶೂಟರ್’ಗಳ ಬಂಧನ

ಏಪ್ರಿಲ್ 14 ರಂದು ಬಾಂದ್ರಾ ವೆಸ್ಟ್‌ನಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡು ಹಾರಿಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮುಂಬೈ ಕ್ರೈಂ ಬ್ರಾಂಚ್ ಬಂಧಿಸಿದೆ.

ಸೋಮವಾರ ತಡರಾತ್ರಿ ಗುಜರಾತ್‌ನ ಭುಜ್‌ನಲ್ಲಿ ಇಬ್ಬರು ಶಂಕಿತ ಶೂಟರ್‌ಗಳನ್ನು ಸೆರೆ ಹಿಡಿಯಲಾಗಿದೆ.

ಸೋಮವಾರ ತಡರಾತ್ರಿ ಗುಜರಾತ್‌ನ ಭುಜ್‌ನಲ್ಲಿ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿ ಬಳಿಕ ಮುಂಬೈನಿಂದ ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ಗುಜರಾತ್‌ನ ಭುಜ್‌ನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಮುಂಜಾನೆ 5 ಗಂಟೆಗೆ ಸಲ್ಮಾನ್ ಖಾನ್ ಅವರ ಅಪಾರ್ಟ್‌ಮೆಂಟ್‌ನ ಹೊರಗೆ ಗುಂಡಿನ ದಾಳಿ ನಡೆದಿದ್ದು, ನಟ ವಾಸವಾಗಿರುವ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಇಬ್ಬರು ವ್ಯಕ್ತಿಗಳು ತಮ್ಮ ಮುಖವನ್ನು ಹೆಲ್ಮೆಟ್‌ನಿಂದ ಮುಚ್ಚಿಕೊಂಡು ಮೋಟಾರ್‌ಸೈಕಲ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಮುಂಬೈ ಕ್ರೈಂ ಬ್ರಾಂಚ್ ಈ ಘಟನೆಯನ್ನು “ಸೂಕ್ಷ್ಮವಾಗಿ ಯೋಜಿತ ದಾಳಿ” ಎಂದು ವಿವರಿಸಿದೆ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳಲ್ಲಿ ಶಂಕಿತರೊಬ್ಬರು ಸಲ್ಮಾನ್ ಖಾನ್ ಅವರ ನಿವಾಸದ ಕಡೆಗೆ ಗುಂಡು ಹಾರಿಸುತ್ತಿರುವುದನ್ನು ನೋಡಬಹುದಾಗಿದೆ.

Latest Indian news

Popular Stories