ಅರವಿಂದ್ ಕೇಜ್ರಿವಾಲ್ ಬಂಧನ: ಅಮೇರಿಕಾ, ಜರ್ಮನಿ ನಂತರ ವಿಶ್ವಸಂಸ್ಥೆಯಿಂದ ಪ್ರತಿಕ್ರಿಯೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಕುರಿತು ಅಮೇರಿಕಾ ಮತ್ತು ಜರ್ಮನಿ ದೇಶಗಳ ಪ್ರತಿಕ್ರಿಯೆ ನಂತರ ವಿಶ್ವ ಸಂಸ್ಥೆ ಪ್ರತಿಕ್ರಿಯೆ ನೀಡಿದ್ದು, “ಭಾರತದಲ್ಲಿ ಪ್ರತಿಯೊಬ್ಬರ ಹಕ್ಕುಗಳನ್ನು ರಕ್ಷಿಸುವ ಆಶಯವಿದೆ” ಎಂದು ಹೇಳಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ, ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್, “ಚುನಾವಣೆಗಳನ್ನು ಹೊಂದಿರುವ ಯಾವುದೇ ರಾಷ್ಟ್ರದಂತೆ ಭಾರತದಲ್ಲಿಯೂ ಪ್ರತಿಯೊಬ್ಬರ ರಾಜಕೀಯ ಮತ್ತು ನಾಗರಿಕ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ನಾವು ಭಾವಿಸುತ್ತೇವೆ. ಇದರಿಂದಾಗಿ ಪ್ರತಿಯೊಬ್ಬರೂ ಮುಕ್ತ ಮತ್ತು ನ್ಯಾಯಯುತವಾದ ವಾತಾವರಣದಲ್ಲಿ ಮತ ಚಲಾಯಿಸಲು ಸಾಧ್ಯವಾಗುತ್ತದೆ ಎಂದು ಕೇಜ್ರಿವಾಲ್ ಅವರ ಬಂಧನ ಮತ್ತು ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಭಾರತದಲ್ಲಿನ “ರಾಜಕೀಯ ಅಶಾಂತಿ” ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಡುಜಾರಿಕ್ ಈ ಹೇಳಿಕೆಗಳನ್ನು ನೀಡಿದ್ದಾರೆ.

Latest Indian news

Popular Stories