ಅಸ್ಸಾಂ | ಯುಸಿಸಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು

ಗುವಾಹಟಿ: ಪ್ರಮುಖ ಬೆಳವಣಿಗೆಯೊಂದರಲ್ಲಿ 1935ರ ದೀರ್ಘಕಾಲದ ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರಾಜ್ಯ ಸರ್ಕಾರ ಶುಕ್ರವಾರ ರದ್ದುಗೊಳಿಸಿದೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಶುಕ್ರವಾರ ರಾತ್ರಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಉತ್ತರಾಖಂಡವು ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ಜಾರಿಗೊಳಿಸಿದ ಮೊದಲ ರಾಜ್ಯವಾಗಿದೆ. ಇದೀಗ ಅಸ್ಸಾಮ್ ಅದನ್ನು ಜಾರಿಗೆ ತರಲು ಮುಂದಾಗುತ್ತಿದೆ.

“ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಿಜಿಸ್ಟ್ರಾರ್ ಈಗ ಹೊಸ ರಚನೆಯ ಅಡಿಯಲ್ಲಿ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳನ್ನು ನೋಂದಾಯಿಸುವ ಉಸ್ತುವಾರಿ ವಹಿಸುತ್ತಾರೆ. ರದ್ದಾದ ಕಾಯ್ದೆಯಡಿ ನೇಮಕಗೊಂಡಿರುವ 94 ಮುಸ್ಲಿಂ ರಿಜಿಸ್ಟ್ರಾರ್‌ಗಳನ್ನು ಅವರ ಸ್ಥಾನದಿಂದ ಬಿಡುಗಡೆ ಮಾಡಲಾಗುತ್ತದೆ.

Latest Indian news

Popular Stories