ವಿಧಾನಸಭಾ ಅಧಿವೇಶನ: ಕೇಸರಿ ಶಾಲಿನೊಂದಿಗೆ ಬಿಜೆಪಿ ಶಾಸಕರು ಪ್ರತ್ಯಕ್ಷ!

ಬೆಂಗಳೂರು: ವಿಧಾನ ಸಭಾ ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದ್ದು ವಿಧಾನ ಸಭೆಯಲ್ಲಿ ಬಿಜೆಪಿ ಶಾಸಕರು ಕೇಸರಿ ಶಾಲಿನೊಂದಿಗೆ ಪ್ರತ್ಯಕ್ಷರಾಗಿದ್ದಾರೆ.

ಶಾಸಕ ಮುನಿರತ್ನ ಅವರು ಬಿಜೆಪಿ ಶಾಸಕರಿಗೆ ಕೇಸರಿ ಶಾಲು ಹಂಚುತ್ತಿರುವ ದೃಶ್ಯ ಕಂಡು ಬಂತು.

ರಾಜ್ಯ ಬಜೆಟ್ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕು ಫೆಬ್ರವರಿ 16ರಂದು ಬಜೆಟ್‌ ಮಂಡನೆ ಮಾಡಲಿದ್ದಾರೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಅಧಿವೇಶನದಲ್ಲಿ ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ, ಬರ ಪರಿಹಾರ ಬಿಡುಗಡೆ ವಿಳಂಬ, ಕಾಮಗಾರಿಯಲ್ಲಿ ಶೇಕಡಾ 40ರಷ್ಟು ಕಮಿಷನ್ ಆರೋಪ, ರಾಜ್ಯದ ಹಣಕಾಸು ಸ್ಥಿತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸದನದಲ್ಲಿ ವಾಕ್ಸಮರ ನಡೆಯುವ ಸಾಧ್ಯತೆ ಇದೆ. ಹಾಗೆಯೇ ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿರುವ ಧ್ವಜಸ್ತಂಭದಲ್ಲಿ ಅನುಮತಿ ಪಡೆಯದೆ ಹಾರಿಸಲಾಗಿದ್ದ ಹನುಮ ಧ್ವಜವನ್ನು ಜಿಲ್ಲಾಡಳಿತ ತೆರವು ಗೊಳಿಸಿದ ಘಟನೆಯನ್ನು ಮುಂದಿಟ್ಟುಕೊಂಡು ರಾಜ್ಯಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಿದ್ಧತೆ ನಡೆಸಿದೆ

Latest Indian news

Popular Stories