ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತ; ಪ್ರವಾಸಿಗರಿಗೆ ನಿರ್ಬಂಧ
ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ.
ಇಂದಿನಿಂದ ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ರಸ್ತೆ ತೆರವು ಕಾರ್ಯ ಹಿನ್ನೆಲೆ ಜು.28ರವರೆಗೆ ಪ್ರವಾಸಿಗರಿಗೆ ನಿರ್ಬಂಧವಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ಬಾಬಾ ಬುಡನ್’ಗಿರಿ, ಹೊನ್ನಮ್ಮನಹಳ್ಳ, ಕೆಮ್ಮಣ್ಣುಗುಂಡಿ, ಸೀತಾಳಯ್ಯನಗಿರಿ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.