ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಲಹಾ ಸಮಿತಿ ಸದಸ್ಯರಾಗಿ ಪತ್ರಕರ್ತ ಋಷಿಕೇಶ ಬಹುದ್ದೂರ್ ದೇಸಾಯಿ ಆಯ್ಕೆ

ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ
ಪ್ರಶಸ್ತಿ ಪುರಸ್ಕೃತ ಸಲಹಾ ಸಮಿತಿ ಸದಸ್ಯರನ್ನಾಗಿ ಬೆಳಗಾವಿ
ಹಿರಿಯ ಪತ್ರಕರ್ತ ಋಷಿಕೇಶ ಬಹುದ್ದೂರ್ ದೇಸಾಯಿ
ಅವರನ್ನು ಆಯ್ಕೆ ಮಾಡಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ
ಆದೇಶ ಹೊರಡಿಸಿದೆ.

ಈ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ಗೆ ವಿವಿಧ ಕ್ಷೇತ್ರಗಳ
ಸಾಧಕರ ಆಯ್ಕೆಗೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ
ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷತೆಯಲ್ಲಿ 30
ಸದಸ್ಯರನ್ನೊಳಗೊಂಡ ಸಲಹಾ ಸಮಿತಿಯನ್ನು ಸರ್ಕಾರ
ರಚಿಸಿದೆ. ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರನ್ನು
ಸಾರ್ವಜನಿಕರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ
ನಾಮನಿರ್ದೇಶನ ಮಾಡಬಹುದಾಗಿದೆ. ಅ.1ರಿಂದ ಅ.
15ರವರೆಗೆ ನಾಮ ನಿರ್ದೇಶನಕ್ಕೆ ಅವಕಾಶ ನೀಡಲಾಗಿದೆ.
ಸಾಧಕರ ಆಯ್ಕೆ ಸಮಿತಿಯು ಸಾಹಿತ್ಯ ವೈದ್ಯಕೀಯ, ಕೃಷಿ,
ಸಮಾಜಸೇವೆ, ಚಲನಚಿತ್ರ, ಕ್ರೀಡೆ ಸೇರಿ ವಿವಿಧ ಕ್ಷೇತ್ರಗಳ
ತಜ್ಞರನ್ನು ಒಳಗೊಂಡಿದೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ಸಂಗೀತ ನೃತ್ಯ
ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ
ಲಲಿತಕಲಾ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ
ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ಪ್ರತಿನಿಧಿಗಳು ಸಮಿತಿಯ ಪದನಿಮಿತ್ತ ಸದಸ್ಯರಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ
ಕಾರ್ಯದರ್ಶಿಯಾಗಿದ್ದಾರೆ.

Latest Indian news

Popular Stories