ಮಂಗಳೂರು, ಮೇ 15: ಯಕೃತ್ತಿನ ಕಾಯಿಲೆಯಿಂದ ಮೂರು ದಿನಗಳಿಂದ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೇ 14 ಭಾನುವಾರ ಮೃತಪಟ್ಟಿದ್ದಾನೆ. ಯುವಕನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಬಜರಂಗದಳ (ಬಿಡಿ) ಕಾರ್ಯಕರ್ತರು ಆರೋಪಿಸಿದ್ದಾರೆ. ಮೃತ ಯುವಕನ ಪಾರ್ಥಿವ ಶರೀರವನ್ನು ಇರಿಸಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಮೃತರನ್ನು ಮಣಿನಾಲ್ಕೂರು ಗ್ರಾಮದ ನೆಲ್ಯಪಲ್ಕೆ ನಿವಾಸಿ ರೂಪೇಶ್ ಅಲಿಯಾಸ್ ನಿತಿನ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಹೊಟ್ಟೆನೋವು ಹೆಚ್ಚಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು
ನಿತಿನ್ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಅವಿವಾಹಿತನಾಗಿದ್ದ. ಬಜರಂಗದಳದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.