ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ 4 ದಿನ ಮಳೆ ಮುನ್ಸೂಚನೆ


: ಹಲವು ದಿನಗಳವರೆಗೆ ಸತಾಯಿಸಿದ ಮಳೆರಾಯ ಈಗೀಗ ಹಲವೆಡೆ ತಂಪೆರೆಯುವ ಮೂಲಕ ರೈತರ ಮುಖದಲ್ಲಿ ಮತ್ತೆ ಭರವಸೆ ಮೂಡಿಸಿದ್ದಾನೆ. ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 4 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರ್ಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ರಾಮನಗರ ಹಾಗೂ ಚಾಮರಾಜನಗರದಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Latest Indian news

Popular Stories