ಬೆಂಗಳೂರು ದಕ್ಷಿಣ ಕ್ಷೇತ್ರ: ಇಂದು ಪ್ರಿಯಾಂಕಾ ಗಾಂಧಿ ಪ್ರಚಾರ- ಅಮಿತ್ ಶಾ ರೋಡ್ ಶೋ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕಾಂಗ್ರೆಸ್‌ ‘ತಾರಾ ಪ್ರಚಾರಕಿ’ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಅಭ್ಯರ್ಥಿಗಳ ಪರ ರಾಜ್ಯದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಪ್ರಿಯಾಂಕಾ ಗಾಂಧಿ ಮತಯಾಚನೆ ಮಾಡಲಿದ್ದಾರೆ. ಚಿತ್ರದುರ್ಗ ನಗರದ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಿಯಾಂಕಾ, ಸಂಜೆ 6 ಗಂಟೆಗೆ ಬೆಂಗಳೂರಿನ ಎಚ್‌ಎಸ್‌ಆರ್‌ ಬಡಾವಣೆಯಲ್ಲಿರುವ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೇವಾಲಾ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡಾ ಈ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ್ ಕಾರಜೋಳ (73) ವಿರುದ್ಧ ಚಿತ್ರದುರ್ಗದಿಂದ 68 ವರ್ಷದ ಬಿಎನ್ ಚಂದ್ರಪ್ಪ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇನ್ನೂ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭರ್ಜರಿ ರೋಡ್​ ಶೋ ನಡೆಸಲಿದ್ದಾರೆ. ಮಂಗಳವಾರ ಸಂಜೆ 7 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಅವರ ರೋಡ್​ ಶೋ 7.30ಕ್ಕೆ ಆರಂಭವಾಗಲಿದೆ‌.

Latest Indian news

Popular Stories