ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಬಿಡುಗಡೆಗೆ ಆದೇಶ

ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಸೋಮವಾರ ಜೈಲಿನಲ್ಲಿದ್ದ ಮಾಜಿ ಪ್ರಧಾನಿ ಮತ್ತು ಪ್ರಮುಖ ವಿರೋಧ ಪಕ್ಷದ ನಾಯಕಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ.ಅವರ ಸಾಂಪ್ರದಾಯಿಕ ಎದುರಾಳಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿ ಮಿಲಿಟರಿ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ.

ಶಹಾಬುದ್ದೀನ್ ನೇತೃತ್ವದ ಸಭೆಯು “ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರನ್ನು ತಕ್ಷಣವೇ ಮುಕ್ತಗೊಳಿಸಲು ಸರ್ವಾನುಮತದಿಂದ ನಿರ್ಧರಿಸಿದೆ” ಎಂದು ಅಧ್ಯಕ್ಷರ ಪತ್ರಿಕಾ ತಂಡ ಹೇಳಿಕೆಯಲ್ಲಿ ತಿಳಿಸಿದೆ.

ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರು ಮತ್ತು BNP ಮತ್ತು ಜಮಾತ್-ಎ-ಇಸ್ಲಾಮಿ ಪಕ್ಷ ಸೇರಿದಂತೆ ಹಲವು ವಿರೋಧ ಪಕ್ಷಗಳ ಉನ್ನತ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

“ವಿದ್ಯಾರ್ಥಿ ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿತರಾಗಿರುವ ಎಲ್ಲ ಜನರನ್ನು ಬಿಡುಗಡೆ ಮಾಡಲು ಸಭೆ ನಿರ್ಧರಿಸಿದೆ” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

Latest Indian news

Popular Stories