ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್

ಕೋಲ್ಕತ್ತಾ: ರಾಜಭವನಕ್ಕೆ ಭೇಟಿ ನೀಡಲು ಭಯವಾಗುತ್ತಿದೆ ಎಂದು ಮಹಿಳೆಯರು ತಮಗೆ ದೂರು ನೀಡಿದ್ದಾರೆ ಎಂದು ಆರೋಪಿಸಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ಶುಕ್ರವಾರ ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಅವಹೇಳನಕಾರಿ ಹೇಳಿಕೆ ನೀಡಬಾರದು ಎಂದು ಈ ಹಿಂದೆ ಆನಂದ ಬೋಸ್ ಅವರು ಕಿಡಿಕಾರಿದ್ದರು. ಇದೀಗ ಬಂಗಾಳದ ರಾಜ್ಯಪಾಲರು ಕೆಲವು ಟಿಎಂಸಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸಚಿವಾಲಯದಲ್ಲಿ ಆಡಳಿತಾತ್ಮಕ ಸಭೆಯಲ್ಲಿ ಗುರುವಾರ ಬ್ಯಾನರ್ಜಿ ಅವರು ಇತ್ತೀಚಿನ ಘಟನೆಗಳಿಂದ ರಾಜಭವನಕ್ಕೆ ಭೇಟಿ ನೀಡಲು ಹೆದರುತ್ತಿದ್ದಾರೆ ಎಂದು ಮಹಿಳೆಯರು ತನಗೆ ತಿಳಿಸಿದ್ದಾರೆ ಎಂದು ಆರೋಪಿಸಿದ್ದರು.

ರಾಜ್ಯಪಾಲ ಸಿವಿ ಆನಂದ ಬೋಸ್ ಶುಕ್ರವಾರ ಕಲ್ಕತ್ತಾ ಹೈಕೋರ್ಟ್‌ಗೆ ತೆರಳಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷದ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೇ 2 ರಂದು, ರಾಜಭವನದ ಗುತ್ತಿಗೆ ಮಹಿಳಾ ಉದ್ಯೋಗಿಯೊಬ್ಬರು ಆನಂದ ಬೋಸ್ ವಿರುದ್ಧ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ತದನಂತರ ಕೋಲ್ಕತ್ತಾ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

Latest Indian news

Popular Stories