ಬಂಗಾಳದ ಗವರ್ನರ್ ಸಿವಿ ಆನಂದ ಬೋಸ್’ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ

ಬಂಗಾಳದ ಗವರ್ನರ್ ಸಿವಿ ಆನಂದ್ ಬೋಸ್ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಮನಕಲಕುವ ಘಟನೆಯೊಂದು ವರದಿಯಾಗಿದೆ.

ರಾಜಭವನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಹಿಳೆಯೊಬ್ಬರು ರಾಜ್ಯಪಾಲರ ಸಿವಿ ಆನಂದ್ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಮುಂಜಾನೆ ಅಧಿಕೃತ ನಿವಾಸದಲ್ಲಿ ರಾಜ್ಯಪಾಲರನ್ನು ಭೇಟಿಯಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಗುರುತು ಬಹಿರಂಗಪಡಿಸದ ಮಹಿಳೆ ಆರೋಪಿಸಿದ್ದಾರೆ.

ಇದೀಗ ದೂರು ಸಲ್ಲಿಸಲು ಮಹಿಳೆ ಪೊಲೀಸರ ಬಳಿ ತೆರಳಿದ್ದಾರೆ. ಮೋದಿ ಭೇಟಿಯ ಸಂದರ್ಭದಲ್ಲೇ ಈ ಘಟನೆ ವರದಿಯಾಗಿರುವು್ದು ಮತ್ತಷ್ಟು ರಾಜಕೀಯ ಚರ್ಚೆಗೆ ಕಾರಣವಾಗಿಸಿದೆ.

Latest Indian news

Popular Stories