ಬೆಂಗಳೂರು(ಫೆ.2) :ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ ನಡೆದಿದೆ.
ಗನ್, ಲಾಂಗ್, ಪೆಪ್ಪರ್ ಸ್ಪ್ರೇ ದಾಳಿ ನಡೆಸಿ ವ್ಯಾಪಾರಿಯೊಬ್ಬನಿಂದ 15 ಲಕ್ಷರೂ. ದರೋಡೆ ಮಾಡಿ ಪರಾರಿಯಾದ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಿಗರೇಟ್ ಡಿಸ್ಟ್ರಿಬ್ಯೂಟರ್ ಗೋಪಾಲ್ ಹಣ ಕಳೆದುಕೊಂಡು ದೂರು ದಾಖಲಿಸಿದ್ದಾರೆ.ಸಿಗರೇಟ್ ಡಿಸ್ಟ್ರಿಬ್ಯೂಟರ್ ಆಗಿರುವ ಗೋಪಾಲ್ ಟಾಟಾ ಏಸ್ ವಾಹನದಲ್ಲಿ ಅಂಗಡಿಗಳಿಂದ ಸಿಗರೇಟ್ ಬಿಲ್ ಕಲೆಕ್ಟ್ ಮಾಡಿದ್ದ ವೇಳೆ ಹಿಂಬಾಲಿಸಿರುವ ಖದೀಮರು. ಕೆಂಗೇರಿಯಿಂದ ಅಂಗಡಿಗಳಲ್ಲಿ ಸಿಗರೇಟ್ ಬಿಲ್ ಕಲೆಕ್ಟ್ ಮಾಡಿಕೊಂಡು ಬರ್ತಾ ಇದ್ರು. ಈ ವೇಳೆ ಡಿಯೋ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಈ ಕೃತ್ಯ ಎಸಗಿದ್ದಾರೆ.