ಬೆಂಗಳೂರಿನಲ್ಲಿ ಸೋಮವಾರ ಎಪ್ರಿಲ್ 24 ರಂದು ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಾಲೂಕಿನ ಕೊಲ್ಲಮೊಗ್ರು ನಿವಾಸಿ, ಬೈಕ್ ಸವಾರ ಮೃತಪಟ್ಟಿದ್ದಾನೆ.
ಮೃತರನ್ನು ಧರ್ಮಪಾಲ ಗೌಡ ಬಾಳೆಬೈಲು ಮತ್ತು ಕಮಲಾಕ್ಷಿ ದಂಪತಿಯ ಪುತ್ರ ಯತೀಶ್ ಬಾಳೆಬೈಲು (30) ಎಂದು ಗುರುತಿಸಲಾಗಿದೆ.
ಯತೀಶ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಯತೀಶ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಸ್ವಲ್ಪ ಹೊತ್ತಿನಲ್ಲೇ ಅವರು ಮೃತಪಟ್ಟರು.
ಅವಿವಾಹಿತರಾಗಿರುವ ಯತೀಶ್ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಇರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರು ತಂದೆ-ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.