
Featured StoryBengaluru Urban
ಬೆಸ್ಕಾಂ ನಿರ್ಲಕ್ಷಕ್ಕೆ ತಾಯಿ-9 ತಿಂಗಳ ಮಗು ಮೃತ್ಯು
ಬೆಂಗಳೂರು: ರಸ್ತೆ ಮೇಲೆ ಹೋಗುತ್ತಿದ್ದಾಗ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗಳು ಇಬ್ಬರು ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಭಾನುವಾರ ನಡೆದಿದೆ.
ಮೃತರನ್ನು ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಎಂದು ಗುರ್ತಿಸಲಾಗಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದ ತಾಯಿ ಹಾಗೂ ಮಗಳು, ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ಬಸ್ ಇಳಿದು ನಡೆದುಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಮೇಲೆ ತುಂಡಾಗಿ ಬಿದ್ದಿದ್ದ ಕರೆಂಟ್ ವೈರ್ ಕಾಣದೇ ತುಳಿದಿದ್ದಾರೆ. ಕ್ಷಣಾರ್ಧದಲ್ಲಿ ವಿದ್ಯುತ್ ಪ್ರವಹಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದುರಂತಕ್ಕೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.




