ಪಟ್ನಾ, ಜ.31: ಬಿಹಾರದಲ್ಲಿ ಭಾರೀ ಬಿರುಸಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ನಡೆಯುತ್ತಿದೆ. ಇದರ ಮಧ್ಯೆ ಒಂದು ಅಹಿತಕರ ಘಟನೆ ನಡೆದಿದೆ. ರಾಹುಲ್ ಗಾಂಧಿ ಅವರು ಪ್ರಯಾಣಿಸುವ ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಇಂದು (ಜ.31) ಹೇಳಿದ್ದಾರೆ.
ಬಂಗಾಳ – ಬಿಹಾರ ಗಡಿಯಲ್ಲಿ ಬಳಿ ಈ ಘಟನೆ ನಡೆದಿದೆ. ಯಾರೋ ರಾಹುಲ್ ಗಾಂಧಿ ಅವರ ಕಾರಿಗೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಕಾರಿನ ಹಿಂಬದಿಯ ಗಾಜು ಜಖಂಗೊಂಡಿದೆ ಎಂದು ಕಾಂಗ್ರೆಸ್ ಹೇಳಿದೆ. ಇನ್ನು ರಾಹುಲ್ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಬಿಹಾರ ತಲುಪಿದೆ. ಇಂದು ಬೆಳಿಗ್ಗೆ ರಾಹುಲ್ ಬಿಹಾರ ಜಿಲ್ಲೆಯಲ್ಲಿ ರೋಡ್ ಶೋ ನಡೆಸಿದ್ದಾರೆ.
ಮಧ್ಯಾಹ್ನದ ಹೊತ್ತಿಗೆ ಮಾಲ್ಡಾ ಮೂಲಕ ಪಶ್ಚಿಮ ಬಂಗಾಳ ತಲುಪುವ ನಿರೀಕ್ಷೆ ಇತ್ತು. ಆದರೆ ಅವರ ಕಾರು ಜಖಂಗೊಂಡ ಕಾರಣ ಯಾತ್ರೆ ನಿರೀಕ್ಷಿತ ಸಮಯಕ್ಕೆ ಪಶ್ಚಿಮ ಬಂಗಾಳಕ್ಕೆ ತಲುಪಲು ಸಾಧ್ಯವಾಗಿಲ್ಲ ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ಇನ್ನು ಬಿಹಾರದಲ್ಲಿ ರಾಜಕೀಯ ಬದಲಾವಣೆಗಳು ಗರಿಗೆದರಿದ್ದು. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿಯೊಮದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳುವ ಒಲುವು ತೋರಿಸಿದ್ದಾರೆ. ಈ ಸಮಯದಲ್ಲೇ ಕಾಂಗ್ರೆಸ್ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಬಿಹಾರದಲ್ಲಿ ನಡೆಸುತ್ತಿದೆ.