ಎಲ್​​ಕೆ ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ

ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್​ಕೆ ಅಡ್ವಾಣಿ ಅವರು ದೇಶದ ಪರಮೋಚ್ಚ ಗೌರವವಾದ ಭಾರತ ರತ್ನಕ್ಕೆ ಭಾಜನರಾಗಿದ್ದಾರೆ.

ತಮ್ಮ ರಾಜಕೀಯ ಗುರುವೂ ಆಗಿರುವ ಅಡ್ವಾಣಿ ಅವರಿಗೆ ಶನಿವಾರ ಭಾರತ ರತ್ನ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಂಥ ಮಹಾನ್ ನಾಯಕನಿಂದ ಕಲಿಯಲು ಅಸಂಖ್ಯ ಅವಕಾಶಗಳು ದೊರೆತಿರುವುದು ಪುಣ್ಯ ವಿಶೇಷ ಎಂದು ಬಣ್ಣಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ಜೀಯವರ ದಶಕಗಳ ಸುದೀರ್ಘ ಸೇವೆಯು ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ಇಷ್ಟೇ ಅಲ್ಲದೆ, ಪಾರದರ್ಶಕತೆ ಮತ್ತು ಸಮಗ್ರತೆಗೆ ಹೆಸರಾಗಿದೆ. ಅದು ರಾಜಕೀಯ ನೀತಿಶಾಸ್ತ್ರದಲ್ಲಿ ಅನುಕರಣೀಯ ಮಾನದಂಡವನ್ನು ಹೊಂದಿಸಿದೆ. ಅವರು ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ವಿಚಾರದಲ್ಲಿ ದೇಶಕ್ಕೆ ಕೊಡುಗೆ ಸಲ್ಲಿಸಲು ಅಪ್ರತಿಮ ಪ್ರಯತ್ನ ಮಾಡಿದ್ದಾರೆ. ಅವರಿಗೆ ಭಾರತರತ್ನ ಪ್ರಶಸ್ತಿ ಪ್ರದಾನ ಮಾಡುವುದು ನನ್ನ ಪಾಲಿಗೆ ಅತ್ಯಂತ ಭಾವನಾತ್ಮಕ ಕ್ಷಣ. ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರಿಂದ ಕಲಿಯಲು ನನಗೆ ಅಸಂಖ್ಯಾತ ಅವಕಾಶಗಳು ಸಿಕ್ಕಿರುವುದು ನನ್ನ ಪುಣ್ಯ ವಿಶೇಷ ಎಂದು ನಾನು ಯಾವಾಗಲೂ ಪರಿಗಣಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

Latest Indian news

Popular Stories