ಇಬ್ಬರು ಸಹೋದ್ಯೋಗಿಗಳು ಮತ್ತು ಇಬ್ಬರು ವಿದ್ಯಾರ್ಥಿಗಳು ತಮ್ಮ ವಿಭಾಗದಲ್ಲಿ ತಮಗೆ ಹಲ್ಲೆ, ಕಿರುಕುಳ ಮತ್ತು ಅವಮಾನ ಮಾಡಿದ್ದಾರೆ ಎಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ದಲಿತ ಸಹಾಯಕ ಪ್ರಾಧ್ಯಾಪಕರ ದೂರಿನ ಆಧಾರದ ಮೇಲೆ ವಾರಣಾಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಘಟನೆಯು ಮೇ 22 ರಂದು ನಡೆದಿದ್ದರೂ, ಆಗಸ್ಟ್ 27 ರವರೆಗೆ ಪ್ರಕರಣ ದಾಖಲಿಸಲು ಪೊಲೀಸರು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಪ್ರಾಥಮಿಕ ತನಿಖೆ ನಡೆಸಿದ ನಂತರ ಇಬ್ಬರು ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ ಅವರ ಮೇಲೆ ಸಹೋದ್ಯೋಗಿಗಳು ಹಲ್ಲೆ ಯತ್ನಿಸಿದ್ದು ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.