ಧರಿನಾಡಿನಲ್ಲಿ ಕರ್ನಾಟಕ ಬಂದ್ ಗೆ ಸಿಗದ ಬೆಂಬಲ

ಧರಿನಾಡಿನಲ್ಲಿ ಕರ್ನಾಟಕ ಬಂದ್ ಗೆ ಸಿಗದ ಬೆಂಬ
ಬೀದರ್ : ಕಾವೇರಿಯಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಕರೆ ಕೊಟ್ಟಿರುವ ಕರ್ನಾಟಕ ಬಂದ್ಗೆ ಶುಕ್ರವಾರ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ಶಾಲಾ,ಕಾಲೇಜುಗಳು, ಆಸ್ಪತ್ರೆ, ಸರ್ಕಾರಿ ಕಚೇರಿಗಳು ಎಂದಿನಂತೆ ನಡೆಯುತ್ತಿವೆ. ವ್ಯಾಪಾರ ವಹಿವಾಟು ಸಹಜವಾಗಿದೆ. ಜನಜೀವನ ಎಂದಿನಂತಿದೆ. ತಾಲ್ಲೂಕು ಕೇಂದ್ರಗಳಲ್ಲೂ ಇದೇ ಪರಿಸ್ಥಿತಿ ಇದೆ. ಬಂದ್ಗೆ ನೈತಿಕ ಬೆಂಬಲ ಸೂಚಿಸಲು ಕರ್ನಾಟಕ ರಕ್ಷಣಾ ವೇದಿಕೆಯವರು ಜಿಲ್ಲಾಧಿಕಾರಿಗೆ ಮಧ್ಯಾಹ್ನ ಮನವಿ ಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಕನ್ನಡ ಸಂಘಟನೆಗಳ ಕಾರ್ಯಕರ್ತರ ಮೇಲೆ ನಿಗಾ ವಹಿಸಿದ್ದಾರೆ. ಪ್ರಮುಖ ವೃತ್ತಗಳಲ್ಲಿ ಬೆರಳೆಣಿಕೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.

ವರದಿ : ಹಣಮಂತ ದೇಶಮುಖ

Latest Indian news

Popular Stories