
Featured StoryNational
ಬೀದರ್ : ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಅಂಬೇಡ್ಕರ್ ವೃತದಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆ
ಬೀದರ್ | ನಗರದ ಅಂಬೇಡ್ಕರ್ ವೃತದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ ನೇತ್ರತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ್ರು. ಅಸ್ಸಾಂನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ್ ಗಾಂಧಿ ಮೇಲೆ ಹಲ್ಲೆಗೆ ಯತ್ನ ಮಾಡಲಾಗಿದ್ದು ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ದ ಧಿಕಾರ ಕೂಗ್ಗಿ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ಹೊರಹಾಕಿದ್ದರು.
ಗೂಂಡಾ ವರ್ತನೆಯ ಬಿಜೆಪಿ ಕಾರ್ಯಕರ್ತರ ವಿರುದ್ದ
ಕೂಡಲೇ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು.




