ಬಿಹಾರದ ವ್ಯಕ್ತಿ, ಅಪ್ರಾಪ್ತ ಪತ್ನಿ ಕಸ್ಟಡಿಯಲ್ಲಿ ಸಾವು | ಉದ್ರಿಕ್ತ ಗುಂಪಿನಿಂದ ಪೊಲೀಸ್ ಠಾಣೆಗೆ ಬೆಂಕಿ

ಬಿಹಾರದ ಅರಾರಿಯಾ ಜಿಲ್ಲೆಯ ತಾರಾಬರಿ ಗ್ರಾಮದಲ್ಲಿ ಒರ್ವ ವ್ಯಕ್ತಿ ಮತ್ತು ಆತನ ಅಪ್ರಾಪ್ತ ‘ಪತ್ನಿ’ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಉದ್ರಿಕ್ತ ಗ್ರಾಮಸ್ಥರು ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. 

ಎರಡು ದಿನಗಳ ಹಿಂದೆ ತನ್ನ ಪತ್ನಿಯ ಮರಣದ ನಂತರ 14 ವರ್ಷದ ಹುಡುಗಿಯನ್ನು ಮದುವೆಯಾಗಿದ್ದ. ಭಾರತದಲ್ಲಿ ಮಹಿಳೆಯರು ಮದುವೆಯಾಗಲು ಕಾನೂನುಬದ್ಧ ವಯಸ್ಸು 18 ಆಗಿರುವುದರಿಂದ ಗುರುವಾರ ಮಧ್ಯಾಹ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಥಳಿಸಿ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಗ್ರಾಮಸ್ಥರಿ ಎಂದು ಆರೋಪಿಸಿದರು.ಮದುವೆಯಾದ ಕೂಡಲೇ ಇಬ್ಬರನ್ನು ಪೊಲೀಸರು ಬಂಧಿಸಿರುವ ಕುರಿತು NDTV ವರದಿ ಮಾಡಿದೆ.

ಪೊಲೀಸ್ ಲಾಕಪ್‌ನ ಸಿಸಿಟಿವಿ ವೀಡಿಯೋ ದಲ್ಲಿ ವ್ಯಕ್ತಿಯೊಬ್ಬ ಲಾಕಪ್ ಬಾಗಿಲಿಗೆ ಹತ್ತಿ ಬಟ್ಟೆಯಿಂದ ನೇಣು ಬಿಗಿದುಕೊಂಡಿರುವ ದೃಶ್ಯ ಕಾಣ ಸಿಕ್ಕಿದೆ.

ಇಬ್ಬರ ಸಾವಿನ ಸುದ್ದಿಯು ಹರಡುತ್ತಿದ್ದಂತೆ, ಕೋಪಗೊಂಡ ಗ್ರಾಮಸ್ಥರು ತಾರಾಬರಿ ಪೊಲೀಸ್ ಠಾಣೆಯನ್ನು ಸುತ್ತುವರೆದು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಿದ್ದಾರೆ. ಸಿಟ್ಟಿಗೆದ್ದ ಗ್ರಾಮಸ್ಥರು ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿ, ನಂತರ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಕನಿಷ್ಠ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಸದರ್ ಎಸ್‌ಡಿಪಿಒ ರಾಂಪುಕರ್ ಸಿಂಗ್ ಸೇರಿದಂತೆ ಹಲವು ಪೊಲೀಸ್ ಠಾಣೆಗಳ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೂ ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ಮುಂದುವರಿಸಿ ಪೊಲೀಸರ ವಿರುದ್ಧ ಘೋಷಣೆ ಕೂಗಿದರು.  

ಥಳಿಸಿದ ನಂತರ ಪೊಲೀಸರ ನಿರ್ಲಕ್ಷ್ಯದಿಂದ ದಂಪತಿ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಲು ಪೊಲೀಸರು ಇಲ್ಲಿಯವರೆಗೆ ನಿರಾಕರಿಸಿರುವ ಕುರಿತು NDTV ವರದಿಯಲ್ಲಿ ಉಲ್ಲೇಖಿಸಿದೆ.

Latest Indian news

Popular Stories