
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್ ಮಾನನಷ್ಟ ದೂರು ದಾಖಲು.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಮಾನನಷ್ಟ ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಾಳವೀಯ ಅವರು ರಾಹುಲ್ ಗಾಂಧಿಗೆ ಸಂಬಂಧಿಸಿದ ವೀಡಿಯೊವನ್ನು ಪ್ರಚಾರಕ್ಕಾಗಿ ಮತ್ತು ಜನರನ್ನು ಪ್ರಚೋದಿಸುವ ಉದ್ದೇಶದಿಂದ ಹಂಚಿಕೊಂಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಬಿಜೆಪಿಯ ಅಮಿತ್ ಮಾಳವೀಯ ಮತ್ತು ಅರುಣ್ ಸೂದ್ ಅವರು ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವಿರುದ್ಧ ದುರುದ್ದೇಶಪೂರಿತ ಮತ್ತು ಸುಳ್ಳು ವಿಷಯವನ್ನು ಹಂಚಿಕೊಂಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆಯ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ.
ರಾಹುಲ್ ಗಾಂಧಿಗೆ ಸಂಬಂಧಿಸಿದ 3ಡಿ ವಿಡಿಯೋವನ್ನು ಪ್ರಿಯಾಂಕ್ ಖರ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ವಿಡಿಯೋವನ್ನು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಮಾಳವೀಯ ಅರುಣ್ ಸೂದ್ ಸೇರಿದಂತೆ ಹಲವು ಪಕ್ಷದ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇದು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಹೆಸರು ಕೆಡಿಸುವ ಯತ್ನ ಮಾತ್ರವಲ್ಲ, ಕೋಮು ಸೌಹಾರ್ದತೆ ಕದಡುವ ಯತ್ನವಾಗಿದೆ ಎಂದರು. ಎಫ್‌ಐಆರ್ ದಾಖಲಾದ ಕೂಡಲೇ ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದರು.
ಪ್ರಿಯಾಂಕ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಮತ್ತು ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿದ್ದಾರೆ.




