ಬೆಂಗಳೂರು: ಬಿಜೆಪಿ ಕರ್ನಾಟಕ ಚುನಾವಣಾ ಪ್ರಣಾಳಿಕೆ ಇಂದು ಬಿಡುಗಡೆ ಮಾಡಿದ್ದು ಏಕರೂಪ ನಾಗರಿಕ ಸಂಹಿತೆ (UCC),ಎನ್.ಆರ್.ಸಿ ಜಾರಿಗೆ ತರುವ ಕುರಿತು ಉಲ್ಲೇಖಿಸಲಾಗಿದೆ. ಈ ವಿವಾದಿತ ಎರಡು ವಿಚಾರಗಳನ್ನು ಕೈಗೆತ್ತಿಕೊಂಡು ಮತ ಬೇಟೆಗೆ ಬಿಜೆಪಿ ತಯಾರಿ ನಡೆಸಿದೆ.
ಬಿಪಿಎಲ್ ಕುಟುಂಬಕ್ಕೆ ಪ್ರತಿದಿನ ಅರ್ಧಲೀಟರ್ ನಂದಿನಿ ಹಾಲು ಕೊಡುತ್ತೇವೆ. ಬಡವರ ಕಲ್ಯಾಣಕ್ಕೆ ನಾವು ಮಹತ್ವ ನೀಡಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಆಯುಷ್ಮಾನ್ ಕಾರ್ಡ್ ಫಲಾನುಭವಿಗಳ ಚಿಕಿತ್ಸಾ ವೆಚ್ಚವನ್ನು 10 ಲಕ್ಷ ರೂ.ಗೆ ಏರಿಕೆ ಮಾಡಲಾಗುವುದು. 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ ನೀಡಲಾಗುವುದು ಎಂದು ಹೇಳಿದ್ದಾರೆ.