
Featured StoryState News
ಉಮರ್ ಖಾಲಿದ್ ಪುಸ್ತಕ ಸಂಬಂಧಿತ ಕಾರ್ಯಕ್ರಮಕ್ಕೆ ಬಿಜೆಪಿ ವಿರೋಧ
ದೊಮ್ಮಲೂರಿನ ಬಿಐಸಿಯಲ್ಲಿ ನಾಳೆ ನಿಗದಿಯಾಗಿರುವ ‘ಉಮರ್ ಖಾಲಿದ್ ಆ್ಯಂಡ್ ಹಿಸ್ ವರ್ಲ್ಡ್’ ಪುಸ್ತಕದ ಕುರಿತ ಕಾರ್ಯಕ್ರಮಕ್ಕೆ ಅನುಮತಿ ಸಂಬಂಧ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.
ನಟ ಪ್ರಕಾಶ್ ರಾಜ್, ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವು ಮುಖಂಡರು ನಾಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ.
ಜೆಎನ್ಯು ಮಾಜಿ ವಿದ್ಯಾರ್ಥಿ ನಾಯಕನಾಗಿದ್ದ ಉಮರ್ ಖಾಲಿದ್, 2020ರ ದೆಹಲಿ ದಂಗೆ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ತಿಹಾರ್ ಜೈಲಿನಲ್ಲಿದ್ದಾರೆ ಎಂದು ಬಿಜೆಪಿ ದೂರಿದೆ.




