Featured StoryState News

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಶರಾಮಿ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಬೆಂಗಳೂರು: ನಗರದ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಭಸ್ಮಗೊಳಿಸಿದ ಘಟನೆ ಗುರುವಾರ ನಸುಕಿನ ಜಾವ ನಡೆದಿದ್ದು ಬೊಮ್ಮನಹಳ್ಳಿ ಪೊಲೀಸರು ಎಸಿಪಿ ಮೈಕೋ ಲೇ ಔಟ್ ನೇತೃತ್ವದಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಆರೋಪಿಗಳ ಪತ್ತೆಗಾಗಿ ವ್ಯಾಪಕ ಜಾಲ ಬೀಸಿರುವ ಪೊಲೀಸರು ದುಷ್ಕರ್ಮಿಗಳನ್ನು ಪತ್ತೆಹಚ್ಚುವ ವಿಶ್ವಾಸದಲ್ಲಿದ್ದಾರೆ.

ಇಂದು ನಸುಕಿನ ಜಾವ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಈ ಕೃತ್ಯ ನಡೆಸಿರುವುದು ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದ್ದು ಮಧ್ಯರಾತ್ರಿ 1:23ರ ಸುಮಾರಿಗೆ ಬಂದ ಇಬ್ಬರು ದುಷ್ಕರ್ಮಿಗಳು ಒಂದು ಲೀಟರ್ ಬಾಟಲ್ ಪೆಟ್ರೋಲ್ ತಂದು ಕಾರಿಗೆ ಬೆಂಕಿ ಹಚ್ಚಿ ಕೆಲವೇ ಹೊತ್ತಿನಲ್ಲಿ ಕೆಲಸ ಮುಗಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಬೊಮ್ಮನಹಳ್ಳಿ ಪೊಲೀಸರಿಂದ ಆರೋಪಿಗಳಿಗಾಗಿ ತಲಾಶ್ ನಡೆಸುತ್ತಿದ್ದಾರೆ.3 ಪ್ರತ್ಯೇಕ ತಂಡಗಳಾಗಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯಲಿದೆ. ಸುದ್ದಗುಂಟೆಪಾಳ್ಯ, ಬೊಮ್ಮನಹಳ್ಳಿ, ತಿಲಕ್‌ನಗರ ಠಾಣೆ ಸೇರಿ ಮೂರು ಠಾಣೆಗಳ ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button