ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ?: CCB ವಿಚಾರಣೆ ಬೆನ್ನಲ್ಲೇ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ BK ಹರಿಪ್ರಸಾದ್

ಬೆಂಗಳೂರು: ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ (BK Hari Prasad) ಅವರನ್ನು ಇಂದು ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದು, ಈ ನಿಲುವಿನಿಂದ ತಮ್ಮದ ಪಕ್ಷದ ಸರ್ಕಾರದ ವಿರುದ್ಧ ಹರಿಪ್ರಸಾದ್ ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ? ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿರುವ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್​ (BK Hariprasad) ಅವರನ್ನು ಶುಕ್ರವಾರ ಸಿಸಿಬಿ ಪೊಲೀಸರು (CCB Police) ವಿಚಾರಣೆ ನಡೆಸಿದರು. ಕೆಕೆ ಗೆಸ್ಟ್​​ಹೌಸ್​ನಲ್ಲಿ ಹರಿಪ್ರಸಾದ್​ ವಿಚಾರಣೆ ನಡೆಸಲಾಯಿತು.

ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ?, ಬೇಕಿದ್ದರೆ ಬಂಧಿಸಿ
ಇನ್ನು ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಪ್ರಸಾದ್ ಕಿಡಿಕಾರಿದ್ದಾರೆ. ವಿಚಾರಣೆಗೆ ಒಳಪಡಿಸುವಂತೆ ನಿರ್ದೇಶನ ನೀಡಿರುವ ಸರ್ಕಾರದ ನಡೆಗೆ ಹರಿಪ್ರಸಾದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ?.. ನನಗೆ ವಿವಿಐಪಿ ಟ್ರೀಟ್​ಮೆಂಟ್​​ ಬೇಡ, ಬೇಕಿದ್ದರೆ ಅರೆಸ್ಟ್ ಮಾಡಿ ಎಂದು ಕಿಡಿಕಾರಿದ್ದಾರೆ.

ಇದು ಕಾಂಗ್ರೆಸ್ ಸರ್ಕಾರವೇ ಅಥವಾ ಆರ್​ಎಸ್​ಎಸ್ ಸರ್ಕಾರವೇ ಎಂದು ಪ್ರಶ್ನಿಸಿದ್ದಾರೆ. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಬೇಕಿದ್ದರೆ ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್​​ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ. ನನ್ನ ಜತೆಗೆ ವಿಜಯೇಂದ್ರ ಅವರನ್ನು ಕೂಡ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಪರಿಸ್ಥಿತಿಯೇ ಹೀಗಾದರೆ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು? ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ.

ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ನಾನು ಇವರ ಬೆದರಿಕೆಗಳಿಗೆಲ್ಲ ಜಗ್ಗಲ್ಲ. ಅಂದು ಕೊಟ್ಟ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ರಾಮ ಮಂದಿರಕ್ಕೆ ಹೋಗುವವರಿಗೆ ಸೂಕ್ತ ರಕ್ಷಣೆ ನೀಡಬೇಕು’ ಎಂದು ಹರಿಪ್ರಸಾದ್​ ಹೇಳಿದರು.

Latest Indian news

Popular Stories