ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಮಂಗಳೂರು: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಇಮೈಲ್ ಬಂದಿರುವುದಾಗಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಎಪ್ರಿಲ್ 29ರಂದು ಇ-ಮೈಲ್ ವಿಮಾನ ನಿಲ್ದಾಣದ ಭದ್ರತೆ, ನಿರ್ವಹಣೆ ಮತ್ತಿತರ ವಿಭಾಗಕ್ಕೆ ಬಂದಿದ್ದು, ದೇಶದ 30ಕ್ಕೂ ಹೆಚ್ಚು ವಿಮಾನ ನಿಲ್ದಾಣಕ್ಕೆ ಈ ರೀತಿಯ ಇ-ಮೈಲ್ ಬಂದಿದೆ ಎಂದು ತಿಳಿದು ಬಂದಿದೆ.

Latest Indian news

Popular Stories