ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡಗಳ ರಾಶಿ – ವಾಹನ ಸವಾರರ ಪರದಾಟ!

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಳೆಯಿಂದಾಗಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು ವಾಹನ ಸವಾರರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.

IMG 20230713 135944 1689239194144 Featured Story, Udupi

60 ಕಿ.ಮೀ ಒಳಗೆ ಎರಡು ಟೋಲ್ ಹೊಂದಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ದೊಡ್ಡ ದೊಡ್ಡ ಹೊಂಡ ಬಿದ್ದಿದ್ದು ವಾಹನ ಸವಾರರಿಗೆ ಅಪಾಯಕಾರಿಯಾಗಿದೆ. ಈಗಾಗಲೇ ಸಂತೆಕಟ್ಟೆಯಲ್ಲಿ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿದ್ದು ಅಲ್ಲಿನ ಪಕ್ಕದ ಪರ್ಯಾಯ ಮಾರ್ಗಗಳು ಕೂಡ ಹದೆಗೆಟ್ಟು ಪದೇ ಪದೇ ಟ್ರಾಫಿಕ್ ಜಾಮ್ ಸಮಸ್ಯೆ ಕಂಡು ಬರುತ್ತಿದೆ.

IMG 20230713 135853 1689239194434 Featured Story, Udupi
IMG 20230713 135848 1689239194692 Featured Story, Udupi

ಸಂತೆಕಟ್ಟೆ, ಬ್ರಹ್ಮಾವರ, ಕಟಪಾಡಿ ಪ್ರದೇಶಗಳಲ್ಲಿ ಹೆದ್ದಾರಿಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಗೋಚರಿಸುತ್ತಿದ್ದು ಅದರಲ್ಲಿ ನೀರು ತುಂಬಿ ಹೊಂಡ ಗೋಚರಿಸದೆ ದ್ವಿಚಕ್ರ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಸ್ಥಿತಿ ಇದೆ.

ಈಗಾಗಲೇ ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರ ಕೆಲವೊಂದು ಕಡೆ ತೇಪೆ ಹಾಕುತ್ತಿದೆ. ಆದರೆ ಟೋಲ್ ಸಂಗ್ರಹಿಸುವ ರಾಷ್ಟ್ರೀಯ ಹೆದ್ದಾರಿ ಇರಬೇಕಾದ ಗುಣಮಟ್ಟದಲ್ಲಿ ಇಲ್ಲದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Latest Indian news

Popular Stories