ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರು ಉಸಿರಾಟದ ಸಮಸ್ಯೆಯಿಂದಾಗಿ ಇಂದು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಹಳೇ ವಿಮಾನ ರಸ್ತೆಯಲ್ಲಿರುವಂತ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವಂತ ಅವರನ್ನು ವೈದ್ಯರು ತಪಾಸಣೆಗೆ ಒಳಪಡಿಸುತ್ತಿದ್ದಾರೆ.ಆಸ್ಪತ್ರೆ ಮೂಲಗಳಿಂದ ತಿಳಿದು ಬಂದ ಮಾಹಿತಿಯಂತೆ ಅವರ ಆರೋಗ್ಯ ಸ್ಥಿರವಾಗಿರೋದಾಗಿ ಹೇಳಲಾಗುತ್ತಿದೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಸಾರ್ವಜನಿಕ ಸಭೆ, ಸಮಾರಂಭಗಳಿಂದಲೂ ದೂರ ಉಳಿದಿದ್ದರು. ಇಂತಹ ಅವರು ಇಂದು ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.