
ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊತ್ತ ಸಂಸದ ಬ್ರಿಜ್ ಭೂಷಣ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹಿಂದೇಟು – ಆರೋಪಿಯಿಂದ ಅಯೋಧ್ಯೆಯಲ್ಲಿ ಶಕ್ತಿ ಪ್ರದರ್ಶನ!
ಕುಸ್ತಿ ಪಟುಗಳ ಲೈಂಗಿಕ ದೌರ್ಜನ್ಯದ ಆರೋಪಿ ಬ್ರಿಜ್ ಭೂಷಣ್ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗುತ್ತಿದ್ದು ಭಾರೀ ಆಕ್ರೋಶಕ್ಕೆ ತುತ್ತಾಗಿದೆ.
ವಿವಿಧ ವಿರೋಧ ಪಕ್ಷಗಳು ಮತ್ತು ನಾಗರಿಕ ಸಮಾಜ ಸಂಘಟನೆಗಳು ನವ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸುತ್ತಿದ್ದಾರೆ.
ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿಯ ಕೈಸರ್‌ಗಂಜ್ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳದ ಆರೋಪಿ ಜೂನ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಶಕ್ತಿ ಪ್ರದರ್ಶನ ಮಾಡಲು ಯೋಜಿಸುತ್ತಿದ್ದಾರೆ. ಆದರೆ ಅಯೋಧ್ಯೆ ಬಿಜೆಪಿ ಘಟಕವು ರ‍್ಯಾಲಿಯಿಂದ ದೂರ ಸರಿದಿದೆ.
ಬ್ರಿಜ್ ಭೂಷಣ್ ಅವರು ಅಯೋಧ್ಯೆಯ ರಾಮ್ ಕಥಾ ಪಾರ್ಕ್‌ನಲ್ಲಿ ಜನ ಚೇತನ ಮಹಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಅಲ್ಲಿ ಸಾಧುಗಳು ಹಾಗೂ ಕಾನೂನು, ಶಿಕ್ಷಣ ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಕಾರ್ಯಕ್ರಮಕ್ಕೆ ಹಲವಾರು ರಾಜ್ಯಗಳಿಂದ ಆಹ್ವಾನಿಸಲಾಗಿದೆ. ದೆಹಲಿ ಪೊಲೀಸರು ಸಂಸದರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿರುವ ಸಮಯದಲ್ಲಿ ರ್ಯಾಲಿ ನಡೆಸಲಾಗುತ್ತಿದೆ.
ಎಫ್‌ಐಆರ್ ದಾಖಲಾದಾಗಿನಿಂದ ಸಿಂಗ್ ರಾಜಕೀಯ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು. ಆದರೆ, ಅವರು ಅಯೋಧ್ಯೆ ರ್ಯಾಲಿಗೆ ಜನರನ್ನು ಆಹ್ವಾನಿಸಲು ಕಳೆದ ವಾರದಿಂದ ಯುಪಿಯ ಅವಧ್ ಪ್ರದೇಶದ ಗೊಂಡಾ, ಅಯೋಧ್ಯೆ, ಬಹ್ರೈಚ್ ಮತ್ತು ಬಸ್ತಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದಾರೆ.




