
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಶೀಘ್ರದಲ್ಲೇ ಜಾರಿ?
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಕೇಂದ್ರ ಸರ್ಕಾರ ಶೀಘ್ರದಲ್ಲೇ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿದೆ. 2024ರ ಲೋಕಸಭೆ ಚುನಾವಣೆಗೂ ಮುನ್ನವೇ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ಈ ಮಾಹಿತಿ ನೀಡಿದ್ದಾರೆ.
ನಿಯಮಗಳು ಸಿದ್ಧವಾಗಿದ್ದು, ಆನ್ಲೈನ್ ಪೋರ್ಟಲ್ ಕೂಡ ಸಿದ್ಧವಾಗಿದೆ. ಇಡೀ ಪ್ರಕ್ರಿಯೆ ಆನ್ಲೈನ್ನಲ್ಲಿ ನಡೆಯಲಿದೆ. ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಜನರು ಅಗತ್ಯ ದಾಖಲೆಗಳಿಲ್ಲದೆ ಭಾರತಕ್ಕೆ ಬಂದ ವರ್ಷವನ್ನು ನಮೂದಿಸಬೇಕಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಅರ್ಜಿದಾರರಿಂದ ಯಾವುದೇ ದಾಖಲೆಗಳನ್ನು ಕೇಳುವುದಿಲ್ಲ.
ಈ ಹಿಂದೆ ಡಿಸೆಂಬರ್ 27, 2023 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಏಕೆಂದರೆ ಇದು ದೇಶದ ಕಾನೂನು. ಈ ವಿಚಾರದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.
ಪಶ್ಚಿಮ ಬಂಗಾಳದಲ್ಲಿ ಕಳೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಸಿಎಎ ಜಾರಿಗೊಳಿಸುವ ಭರವಸೆ ಬಿಜೆಪಿಯ ಪ್ರಮುಖ ಚುನಾವಣಾ ವಿಷಯವಾಗಿತ್ತು.




