ತಮಿಳುನಾಡಿನಲ್ಲಿ ಸಿಎಎ ಜಾರಿಗೆ ತರಬಾರದು: ಬಿಜೆಪಿ ವಿರುದ್ಧ ವಿಜಯ್ ಆಕ್ರೋಶ

ಚೆನ್ನೈ: 2019 ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೊಳಿಸಿದ ನಂತರ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತಮಿಳು ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ದಳಪತಿ ವಿಜಯ್ ವಾಗ್ದಾಳಿ ನಡೆಸಿದ್ದಾರೆ.

ಡಿಸೆಂಬರ್ 31, 2014 ಕ್ಕಿಂತ ಮೊದಲು ಭಾರತಕ್ಕೆ ಬಂದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ನೀಡುವ ಕಾನೂನನ್ನು ಸಂಸತ್ತು ಅಂಗೀಕರಿಸಿದ ನಾಲ್ಕು ವರ್ಷಗಳ ನಂತರ ಕೇಂದ್ರ ಸರ್ಕಾರ ಸೋಮವಾರ ಜಾರಿ ಮಾಡಿದೆ.

ಇತ್ತೀಚೆಗಷ್ಟೇ ರಾಜಕೀಯ ಪ್ರವೇಶ ಮಾಡಿದ ನಟ ವಿಜಯ್, ಸಿಎಎ ಜಾರಿಗೆ ತರಲು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.
“ದೇಶದ ಎಲ್ಲಾ ನಾಗರಿಕರು ಸಾಮಾಜಿಕ ಸಾಮರಸ್ಯದಿಂದ ಬದುಕುವ ವಾತಾವರಣದಲ್ಲಿ ಭಾರತೀಯ ಪೌರತ್ವ ತಿದ್ದುಪಡಿ ಕಾಯಿದೆ 2019 (ಸಿಎಎ) ನಂತಹ ಯಾವುದೇ ಕಾನೂನನ್ನು ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ” ಎಂದು ವಿಜಯ್ ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಕಾನೂನು ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು.

“ತಮಿಳುನಾಡಿನಲ್ಲಿ ಈ ಕಾನೂನು ಜಾರಿಯಾಗದಂತೆ ನಾಯಕರು ಖಚಿತಪಡಿಸಿಕೊಳ್ಳಬೇಕು” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.
ತಮಿಳುನಾಡಿನ ಇತರ ಪಕ್ಷದ ನಾಯಕರೂ ಸಿಎಎ ವಿರುದ್ದ ಬಿಜೆಪಿಯನ್ನು ಟೀಕೆ ಮಾಡಿದ್ದಾರೆ. ಸಿಎಎ ಬಳಸಿ ಬಿಜೆಪಿಯು ಜನರನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.

Latest Indian news

Popular Stories