ಅಲ್ಪಸಂಖ್ಯಾತ ಸಮುದಾಯಗಳ ಪೌರತ್ವವನ್ನು ಸಿಎಎ ಕಸಿದುಕೊಳ್ಳುದಿಲ್ಲ – ಅಮಿತ್ ಶಾ

ಯಾವುದೇ ಸಂದರ್ಭದಲ್ಲೂ ಸಿಎಎಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಿರೋಧ ಪಕ್ಷಗಳು ಸಿಎಎ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿವೆ. ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲ, ನಾವು ಸಿಎಎಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಸಿಎಎ ಮೂಲಕ ಮತಗಳನ್ನು ಪಡೆಯುವ ತಂತ್ರವನ್ನು ಬಿಜೆಪಿ ಮಾಡುತ್ತಿದೆ ಎನ್ನುವ ವಿರೋಧಪಕ್ಷಗಳ ಮಾತಿಗೆ ಶಾ ತಿರುಗೇಟು ನೀಡಿದ್ದು ಈ ರೀತಿ ಹೇಳುವುದು ಅವರ ಇತಿಹಾಸ, ಆದರೆ ಸಿಎಎ ಜಾರಿಗೆ ತಂದಿರುವುದು ಮೋದಿ ಇತಿಹಾಸ, ಮೋದಿಯವರ ಪ್ರತಿ ಭರವಸೆಯೂ ಈಡೇರಿದೆ ಎಂದಿದ್ದಾರೆ.

ಸಿಎಎಯನ್ನು ಪಶ್ಚಿಮ ಬಂಗಾಳದಲ್ಲಿ ಜಾರಿ ಮಾಡುವುದಿಲ್ಲ ಎನ್ನುವ ಮಮತಾ ಬ್ಯಾನರ್ಜಿ ಹೇಳಿಕೆ ಕುರಿತು ಮಾತನಾಡಿದ ಶಾ, ಬಂಗಾಳದಲ್ಲೂ ಬಿಜೆಪಿ ಅಧಿಕಾರಕ್ಕೆ ಬಂದು ಒಳನುಸುಳುವಿಕೆಯನ್ನು ನಿಲ್ಲಿಸುವ ಸಮಯ ದೂರವಿಲ್ಲ ಎಂದು ಹೇಳಿದರು.

ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಸಾರ್ವಭೌಮ ಹಕ್ಕು, ನಾವು ಇದರಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.

ಅಲ್ಪಸಂಖ್ಯಾತರು ಅಥವಾ ಯಾವುದೇ ವ್ಯಕ್ತಿ ಭಯಪಡುವ ಅಗತ್ಯವಿಲ್ಲ ಏಕೆಂದರೆ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಿಎಎಯಲ್ಲಿ ಯಾವುದೇ ಅವಕಾಶವಿಲ್ಲ.

ಸಿಎಎ ಹಿಂದೂಗಳು, ಬೌದ್ಧರು, ಜೈನರು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪಾರ್ಸಿ ನಿರಾಶ್ರಿತರಿಗೆ ಹಕ್ಕು ಮತ್ತು ಪೌರತ್ವವನ್ನು ನೀಡಲು ಮಾತ್ರವಾಗಿದೆ ಎಂದಿದ್ದಾರೆ.

Latest Indian news

Popular Stories