ಅರೆಕಾಲಿಕ ಉಪನ್ಯಾಸಕ ಹುದ್ದೆ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಕರೆ

ವಿಜಯಪುರ: ವಿಜಯಪುರ ಕೃಷಿ ಮಹಾವಿದ್ಯಾಲಯದಲ್ಲಿ ಅರೆಕಾಲಿಕ ಉಪನ್ಯಾಸಕ ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ನೇ

ಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅಕ್ಟೋಬರ್ 17ರಂದು ಬೆಳಿಗ್ಗೆ 10-30ಕ್ಕೆ ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಸಂದರ್ಶನ ಕೊಠಡಿಯಲ್ಲಿ ಆಯೋಜಿಸಲಾದ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ದಾಖಲೆಗಳು ಹಾಗೂ ಮೂಲ ದಾಖಲೆಗಳ ಎರಡು ಝರಾಕ್ಸ್ ಪ್ರತಿಗಳು ಮತ್ತು ಎರಡು ಭಾವಚಿತ್ರಗಳನ್ನು ಸಂದರ್ಶನದಲ್ಲಿ ಸ್ಥಳದಲ್ಲಿ ಒದಗಿಸುವ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಮಹಾವಿದ್ಯಾಲಯ ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Latest Indian news

Popular Stories