ಸುರತ್ಕಲ್: ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ಮಸೀದಿಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಸೆ.16) ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಾಪುರ ಕಾಟಿಪಳ್ಳ ಬಳಿ ಇರುವ ಮಸೀದಿಗೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳ ತಂಡವೊಂದು ಕಲ್ಲು ಬಿಸಾಡಿ ಸ್ಥಳದಿಂದ ಪರಾರಿಯಾಗಿದ್ದರು.
ಇದೀಗ ಪೊಲೀಸರ ತಂಡವು ನಾಲ್ವರನ್ನು ಬಂಧಿಸಿದ್ದಾರೆ. ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಜಿತ್ ಎಂಬವರು ಬಂಧಿತ ಆರೋಪಿಗಳೆಂದು ತಿಳಿದುಬಂದಿದೆ.