ಬೆಂಗಳೂರು : ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಮೇಲಿನ ಆದೇಶ ನೀಡಿದ್ದಾರೆ. 2 ಲಕ್ಷ ಬಾಂಡ್, ಇಬ್ಬರ ಶೂರಿಟಿ, ಸಾಕ್ಷಿನಾಶ ಮಾಡಬಾರದು ಹಾಗೂ ತನಿಖೆಗೆ ಸಹಕರಿಸಲು ಷರತ್ತು ವಿಧಿಸಿದೆ.