ಕಾವೇರಿ, ಮಹದಾಯಿ ವಿವಾದ: ಆಗಸ್ಟ್ 23ರಂದು ಸರ್ವಪಕ್ಷ ಸಭೆ ಕರೆದ ರಾಜ್ಯ ಸರ್ಕಾರ

ಬೆಂಗಳೂರು: ಕಾವೇರಿ ಮತ್ತು ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆ.30ರಂದು ಸರ್ವ ಪಕ್ಷಗಳ ಸಭೆ ನಡೆಯಲಿದೆ.

ರಾಜ್ಯದಲ್ಲಿ ಮಳೆ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರು ಕಡಿಮೆ ಇದೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಸರ್ಕಾರವನ್ನು ಸಂದಿಗ್ದಕ್ಕೆ ಸಿಲುಕಿಸಿದ್ದು, ಈ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸರ್ವಪಕ್ಷಗಳ ಮುಖಂಡರ ಸಭೆ ನಡೆಸಲಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಬೆಳಿಗ್ಗೆ ಸರ್ವ ಪಕ್ಷಗಳ ಸಭೆ ನಡೆಯಲಿದ್ದು, ಕಾವೇರಿ ಸಂಕಷ್ಟ ಸೂತ್ರ ಹಾಗೂ ರಾಜ್ಯದ ರೈತರ ಹಿತರಕ್ಷಣೆ ಸಂಬಂಧ ಏನೆಲ್ಲಾ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಲಿದುಬಂದಿದೆ.

ಮಳೆಯ ಅಭಾವದಿಂದ ರಾಜ್ಯದಲ್ಲಿ ನೀರಿನ ಕೊರತೆಯಾಗಿದೆ. ಕುಡಿಯುವ ನೀರಿಗೂ ತೊಂದರೆಯಾಗಿದೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ವಾದಿಸಿದ್ದರೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನಿತ್ಯ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶಿಸಿದೆ. ಈ ಆದೇಶ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ವಲ್ಪ ಮಟ್ಟಿನ ನೀರನ್ನು ಬಿಡುಗಡೆ ಮಾಡಿದೆ. ನೀರು ಬಿಡುಗಡೆಗೆ ರೈತರು ಹಾಗೂ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಚರ್ಚಿಸಲು ಸರ್ವಪಕ್ಷಗಳ ಸಭೆಯನ್ನು ಬುಧವಾರ ನಿಗದಿ ಮಾಡಿದ್ದಾರೆ.

ಈ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ, ರಾಜ್ಯದ ನಿಲುವು ಏನಾಗಿರಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.

ಕಾವೇರಿ ಜಲವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಬುಧವಾರ (ಆಗಸ್ಟ್ 23) ಸರ್ವಪಕ್ಷ ಸಭೆಯನ್ನು ಕರೆದಿದೆ. ಸಭೆಯಲ್ಲಿ ಭಾಗಿಯಾಗುವಂತೆ ನಾನು ಕೆಲವು ಹಿರಿಯ ಸಂಸದರನ್ನು ಕರೆಯಲಾಗಿದೆ, ವಿವಾದ ಸಂಬಂಧ ಪರಿಹಾರ ಕಂಡುಕೊಳ್ಳಲು ಈ ಸಭೆಯನ್ನು ಕರೆಯಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

Latest Indian news

Popular Stories