ರಾಜ್ಯದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ತಮಿಳುನಾಡಿಗೆ ನೀರು ಬಿಡದಂತೆ ತೀವ್ರಗೊಂಡ ಹೋರಾಟ, ಮಂಡ್ಯ ಬಂದ್, ಎಲ್ಲೆಡೆ ಹೆಚ್ಚಿದ ಭದ್ರತೆ

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ಮತ್ತಷ್ಟು ತೀವ್ರಗೊಂಡಿದೆ. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸದಂತೆ ಒತ್ತಾಯಿಸಿ ರೈತ ಸಂಘಟನೆಗಳು ಶನಿವಾರ ಮಂಡ್ಯ ಹಾಗೂ ಮದ್ದೂರಿನಲ್ಲಿ ಬಂದ್ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ರೈತ ಸಂಘಟನೆಗಳ ಬಂದ್ ಕರೆಗೆ ಎಲ್ಲಾ ಸಂಘಟನೆಗಳು ಬೆಂಬಲ ಘೋಷಿಸಿವೆ. ಈಗಾಗಲೇ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಆಗಿದ್ದು, ವಾಹನ ಸಂಚಾರ, ಶಾಲೆ ಕಾಲೇಜು ಬಂದ್ ಆಗಿವೆ. ತುರ್ತು ಮತ್ತು ಅಗತ್ಯ ಸೇವೆಗಳು ಮಾತ್ರ ಲಭ್ಯವಿದೆ ಎಂದು ತಿಳಿದುಬಂದಿದೆ.

ಈ ನಡುವೆ ಭಾನುವಾರ ಮದ್ದೂರು ಕೂಡ ಸ್ತಬ್ಧ ಆಗಲಿದೆ. ಈ ಬಂದ್ ದಶಪಥದ ರಸ್ತೆಯ ಮೇಲೆ ಪರಿಣಾಮ ಬೀರುವ ಎಲ್ಲಾ ಸಾಧ್ಯತೆಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Latest Indian news

Popular Stories