ವಿದೇಶಿ ನಿಧಿಯ ನಿಯಮ ಉಲ್ಲಂಘನೆ ಆರೋಪ | ಸಮಾಜಿಕ ಕಾರ್ಯಕರ್ತ ಹರ್ಷ್ ಮಂದರ್ ಎನ್‌ಜಿಒ ಸಿಬಿಐನಿಂದ ಶೋಧ

ನವ ದೆಹಲಿ: ಬರಹಗಾರ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಂದರ್ ಸ್ಥಾಪಿಸಿದ ಎನ್‌ಜಿಒ ವಿರುದ್ಧ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆಯ ಆರೋಪದ ಮೇಲೆ ಸಿಬಿಐ ಪ್ರಕರಣವನ್ನು ದಾಖಲಿಸಿದೆ. ಶುಕ್ರವಾರ ಅದರ ಕಚೇರಿಯಲ್ಲಿ ಶೋಧ ಕಾರ್ಯ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಸೋನಿಯಾ ಗಾಂಧಿ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಳಿಯ ಮಾಜಿ ಸದಸ್ಯ ಹರ್ಷ್ ಮಂದರ್ ಅವರು ಎನ್ಜಿಒ ‘ಅಮನ್ ಬಿರಾದಾರಿ’ಯ ಸ್ಥಾಪಕರಾಗಿದ್ದಾರೆ.

ಕೇಂದ್ರ ಗೃಹ ಸಚಿವಾಲಯದ ದೂರಿನ ಮೇರೆಗೆ ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಯ ವಿವಿಧ ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಮನ್ ಬಿರಾದಾರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Latest Indian news

Popular Stories