ವಂಚನೆ ಪ್ರಕರಣ: ನ್ಯಾಯಾಲಯದಲ್ಲಿ ಅತ್ತ ಚೈತ್ರಾ ಕುಂದಾಪುರ

ಬೆಂಗಳೂರು: ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಆಕೆಯ ಸಂಗಡಿಗರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬುಧವಾರ ಬೆಂಗಳೂರಿನ 1 ನೇ ಎಪಿಎಂಸಿ ಕೋರ್ಟ್ ಗೆ ಹಾಜರು ಪಡಿಸಲಾಗಿದ್ದು, ಸೆ. 23  ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಂಚನೆಯಲ್ಲಿ ಭಾಗಿಯಾದ ಆರೋಪಿಗಳಾದ ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್, ಧನ್ ರಾಜ್ ಅವರನ್ನೂ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕೋರ್ಟ್ ನಲ್ಲಿ ಚೈತ್ರಾ,  ಜಡ್ಜ್ ಎದುರು ಕಣ್ಣೀರು ಹಾಕಿ, ‘ನನಗೆ ಪೊಲೀಸರು ಕಿರಿಕಿರಿ ಮಾಡಿದ್ದಾರೆ’ ಎಂದು ಹೇಳಿರುವುದಾಗಿ ವರದಿಯಾಗಿದೆ.

ಐಷಾರಾಮಿ ಜೀವನ
ವಂಚನೆ ಪ್ರಕರಣ ಬೆಳಕಿಗೆ ಬರುವ ಮುನ್ನ ಚೈತ್ರಾ ದುಬಾರಿ ಬೆಲೆಯ ಕಾರು ಖರೀದಿಸಿ ಐಷಾರಾಮಿ ಜೀವನ ನಡೆಸುತ್ತಿದ್ದುದು ಬಯಲಾಗಿದೆ.

ವಿಧಾನಸಭಾ ಚುನಾವಣೆ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

Latest Indian news

Popular Stories