ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ 7 ಕೋಟಿ ವಂಚನೆ ಆರೋಪ

ಬೆಂಗಳೂರು: ಹಿಂದೂ ಸಂಘಟನೆಯ ನಾಯಕಿ ಚೈತ್ರಾ ಕುಂದಾಪುರ ರನ್ನು ಸಿಸಿಬಿ ಬೆಂಗಳೂರು ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೈಂದೂರುನ ಸಮಾಜ ಸೇವಕರೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಚೈತ್ರರನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

chaitra kundapura 07 169454673416x9 1 Featured Story, State News

ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಇಬ್ಬರು ಆರೋಪಿಗಳನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಚೈತ್ರ ಹಾಗೂ ಅವರ ಸಂಗಡಿಗರು ಕೇಂದ್ರದ ನಾಯಕರು ಹಾಗೂ ಆರೆಸ್ಸೆಸ್ ಮುಖಂಡರ ಹೆಸರಲ್ಲಿ ಈ ಮೋಸ ಮಾಡಿದ್ದಾರೆ. ಚೈತ್ರ ಹಾಗೂ ನಾಲ್ಕೈದು ಜನರ ತಂಡ ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರ ತಂಡವನ್ನೂ ಸೃಷ್ಟಿಮಾಡಿದ್ದರು ಎನ್ನಲಾಗಿದೆ. ಈಗ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ನಾಯಕ್ ಪೆಲತ್ತೂರು ಪೊಲೀಸರ ಅತಿಥಿಯಾಗಿದ್ದಾರೆ. ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಗಗನ್ ಕಡೂರು ಹಾಗೂ ಪ್ರಸಾದ್ ರನ್ನು ವಶಕ್ಕೆ ಪಡೆಯಲಾಗಿತ್ತು.

Latest Indian news

Popular Stories