
Featured StoryState News
ವಂಚನೆ ಪ್ರಕರಣ | ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದ ಚೈತ್ರಾ, ಶ್ರೀಕಾಂತ್
ವಿಧಾನಸಭಾ ಚುನಾವಣೆ ವೇಳೆ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ಜೈಲು ಸೇರಿದ್ದ ಚೈತ್ರಾ ಜಾಮೀನು ಪಡೆದು ಹೊರ ಬಂದಿದ್ದಾರೆ.
ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಬುಧವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಚೈತ್ರಾ ಜೊತೆ ಮತ್ತೋರ್ವ ಆರೋಪಿ ಶ್ರೀಕಾಂತ್ ಸಹ ಬಿಡುಗಡೆಯಾದರು. ಜೈಲಿನಿಂದ ಹೊರಬಂದ ಚೈತ್ರಾ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟಿದ್ದಾರೆ.
ಗೋವಿಂದ ಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ, ಹೊಸಪೇಟೆಯ ಅಭಿನವ ಹಾಲಶ್ರೀ ಸ್ವಾಮಿ ಮತ್ತು ಗ್ಯಾಂಗ್ 4 ಕೋಟಿಗೂ ಹೆಚ್ಚು ಹಣ ಪಡೆದು ವಂಚಿಸಿತ್ತು.




