ಚಾಮರಾಜನಗರ: ಬಿಜೆಪಿಗೆ ಶಾಕ್; ಕಾಂಗ್ರೆಸ್ ಸೇರಿದ 6 ಪುರಸಭಾ ಸದಸ್ಯರು!

ಚಾಮರಾಜನಗರ: ಚಾಮರಾಜನಗರದಲ್ಲಿ ಬಿಜೆಪಿಗೆ ಕಾಂಗ್ರೆಸ್ ಆಪರೇಷನ್ ಹಸ್ತದ ಮೂಲಕ ಶಾಕ್ ನೀಡಿದ್ದು 6 ಮಂದಿ ಬಿಜೆಪಿ ಸದಸ್ಯರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಈ ದೊಡ್ಡ ಬೆಳವಣಿಗೆ ನಡೆದಿದೆ.

ಬಿಜೆಪಿಯ 6 ಸದಸ್ಯರು ಕಾಂಗ್ರೆಸ್ ಸೇರ್ಪಡೆಯಿಂದ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ನಿರಂಜನ್ ಕುಮಾರ್​ಗೆ ಸ್ವ ಕ್ಷೇತ್ರದಲ್ಲೇ ಭಾರಿ ಮುಖಭಂಗವಾಗಿದೆ. 13 ಮಂದಿ ಬಿಜೆಪಿ ಸದಸ್ಯರ ಪೈಕಿ 6 ಸದಸ್ಯರಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಅದರಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಇನ್ನು ಕಾಂಗ್ರೆಸ್​​ಗೆ ಬೆಂಬಲ ನೀಡಿದ ಬಿಜೆಪಿ ಸದಸ್ಯರಿಗೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನವನ್ನೇ ಕಾಂಗ್ರೆಸ್ ಬಿಟ್ಟು ಕೊಟ್ಟಿದೆ.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಬಂದ ಕಿರಣ್ ಗೌಡ ನಾಮ ನಿರ್ದೇಶನ ಮಾಡಲಾಗಿದ್ದು, ಉಪಾಧ್ಯಕ್ಷೆ ಸ್ಥಾನಕ್ಕೆ ಬಿಜೆಪಿಯಿಂದ ಕಾಂಗ್ರೆಸ್​​​ಗೆ ಬೆಂಬಲಿಸಿದ ಹೀನಾ ಕೌಸರ್ ನಾಮನಿರ್ದೇಶನ ಮಾಡಲಾಗಿದೆ. ಇನ್ನು ಬಿಜೆಪಿಯಿಂದ ನಾಮಿನೇಷನ್ ಮಾಡುವವರೇ ಇಲ್ಲದ ಕಾರಣ ಅಧ್ಯಕ್ಷ ಸ್ಥಾನ ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ.

Latest Indian news

Popular Stories