ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ

ಆಂಧ್ರಪ್ರದೇಶ: ಮಾಜಿ ಮುಖ್ಯಮಂತ್ರಿ, ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸೆ.9ರ ಶನಿವಾರ ಆಂಧ್ರದ ನಂದ್ಯಾಲದಲ್ಲಿ ನಸುಕಿನ ವೇಳೆ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಚಂದ್ರಬಾಬು ನಾಯ್ಡು ವಿರುದ್ಧ 58 ಕೋಟಿ ಯೋಜನೆಯ ವೆಚ್ಚವನ್ನು 371 ಕೋಟಿ ರೂ.ಗೆ ಹೆಚ್ಚಿಸಿದ ಆರೋಪ ಕೇಳಿಬಂದಿತ್ತು. ಈ  ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್​ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಅವರನ್ನು ಬಂಧಿಸಲಾಗಿದೆ.

Latest Indian news

Popular Stories