ಅಪಘಾತದಲ್ಲಿ ಮಡಿದ ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ

ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್​ (Pavithra Jayaram) ಅವರು ರಸ್ತೆ ಅಪಘಾತದಲ್ಲಿ ನಿಧನರಾದರು. ಈಗ ಇನ್ನೊಂದು ಶಾಕಿಂಗ್​ ಸುದ್ದಿ ಕೇಳಿಬಂದಿದೆ.

ಪವಿತ್ರಾ ಜಯರಾಮ್​ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು (Chandu) ಅವರು ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್​ ಜೊತೆ ಚಂದು ಆಪ್ತವಾಗಿದ್ದರು.

ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್​ನಲ್ಲಿ ಆತ್ಮಹತ್ಯೆ (Chandu Suicide) ಮಾಡಿಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ತೆಲುಗಿನ ಹಲವು ಧಾರಾವಾಹಿಗಳಲ್ಲಿ ಚಂದು ನಟಿಸುತ್ತಿದ್ದರು. ಇತ್ತೀಚೆಗೆ ಅವರು ಪವಿತ್ರಾ ಜಯರಾಮ್​ ಜೊತೆ ಬೆಂಗಳೂರಿಗೆ ಬಂದಿದ್ದರು. ಸಿನಿಮಾವೊಂದಕ್ಕೆ ಸಹಿ ಮಾಡಿದ ಬಳಿಕ ಅವರು ಪುನಃ ಹೈದರಾಬಾದ್​ಗೆ ಹಿಂದಿರುಗುವಾಗ ಕಾರು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಚಂದುಗೆ ಪೆಟ್ಟಾಗಿತ್ತು. ಅದನ್ನು ನೋಡಿ ಗಾಬರಿಗೊಂಡ ಪವಿತ್ರಾ ಅವರ ಉಸಿರು ನಿಂತುಹೋಗಿತ್ತು. ಆ ದುರಂತದ ನೆನಪು ಮಾಸುವುದಕ್ಕೂ ಮುನ್ನವೇ ಚಂದು ನಿಧನರಾಗಿದ್ದಾರೆ.

Latest Indian news

Popular Stories