Featured StoryState News

ಚಾರ್ಮಾಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ – ನಿತಿನ್ ಗಡ್ಕರಿ

ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ (ಚಾರ್ಮಾಡಿ ಘಾಟ್) ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ದೊರೆತಿದೆ.

ಚಾರ್ಮಾಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ನೀಡಲಾಗಿದೆ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ’ಇಪಿಸಿ ಮಾದರಿಯಲ್ಲಿ 10.8 ಕಿ.ಮೀ ರಸ್ತೆಯ ವಿಸ್ತರಣೆ ಮಾಡಲಾಗುತ್ತದೆ. ಈ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತಿಸಲಾಗುತ್ತದೆ. ಚಾರ್ಮಡಿ ಘಾಟ್ ನ ಗುಡ್ಡಗಾಡು ಪ್ರದೇಶದಲ್ಲಿ ಕೈಗೆತ್ತಿಕೊಳ್ಳುವಂತಹ ಉಪಕ್ರಮವು ಸವಾಲಿನದ್ದಾಗಿದೆ. ಇದರೊಂದಿದೆ ಸಂಚಾರ ವ್ಯವಸ್ಥೆ ಗಣನೀಯವಾಗಿ ಸುಧಾರಣೆಯಾಗಲಿದೆ’ ಎಂದು ಬರೆದುಕೊಂಡಿದ್ದಾರೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button